ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಂತೋಷ್ ಬಜಾಲ್ ಸವಾಲು - Karavali Times ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಂತೋಷ್ ಬಜಾಲ್ ಸವಾಲು - Karavali Times

728x90

16 February 2021

ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಂತೋಷ್ ಬಜಾಲ್ ಸವಾಲು

ಬಮಂಗಳೂರು, ಫೆ. 16, 2021 (ಕರಾವಳಿ ಟೈಮ್ಸ್) : ಮೋದಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತಿದರೆ ಪೆÇಲೀಸ್ ಕೇಸು ಹಾಕಿ ಹೆದರಿಸುವ ಪರಿಪಾಠ ಹೆಚ್ಚುತ್ತಿದ್ದು ಇಂತಹ ಕೇಸುಗಳಿಗೆ ಹೆದರಿ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಡಿವೈಎಫ್‍ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಆಕ್ರೋಶ ವ್ಯಕ್ತಪಡಿಸಿದರು. ರೈತ ಹೋರಾಟ ಬೆಂಬಲಿಸಿ ಸಿದ್ಧಪಡಿಸಿದ್ದ ಟೂಲ್ ಕಿಟ್ ಎಡಿಟ್ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಪೆÇಲೀಸರು ಬಂಧಿಸಿದ ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಖಂಡಿಸಿ ಡಿವೈಎಫ್‍ಐ ಹಾಗೂ ಎಸ್‍ಎಫ್‍ಐ ಸಂಘಟನೆಗಳು ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರಕಾರ ಸರ್ವಾಧಿಕಾರಿ ನೀತಿಯನ್ನು ಅನುಸರಿಸುತ್ತಿದೆ. ಕನ್ಹಯ್ಯ ಕುಮಾರ್ ನಿಂದ ಹಿಡಿದು ದಿಶಾ ರವಿ ವರೆಗೆ ಈ ಸರಕಾರ ಪೆÇಲೀಸರನ್ನು ಬಳಸಿಕೊಂಡು ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಅನೇಕ ಬುದ್ಧಿಜೀವಿಗಳು, ವಿದ್ಯಾರ್ಥಿಗಳು, ವಿದ್ವಾಂಸರನ್ನು ಜೈಲಿಗಟ್ಟಿದೆ. ಸರಕಾರದ ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಎಡಪಂಥೀಯ ಸಂಘಟನೆಗಳ ಕಾರ್ಯಕರ್ತರಾದ ನಾವುಗಳು ಬೀದಿಗಿಳಿದು ಹೋರಾಡಿ ದೇಶದ ಸಂವಿಧಾವನ್ನು ರಕ್ಷಿಸಲಿದ್ದೇವೆ ಎಂದು ಘೋಷಿಸಿದರು. ಡಿವೈಎಫ್‍ಐ ಜಿಲ್ಲಾ ಸಮಿತಿ ಸದಸ್ಯ ಅಶ್ರಫ್ ಕೆ ಸಿ ರೋಡ್ ಮಾತನಾಡಿ, ರಾಜ್ಯ ಗೃಹ ಇಲಾಖೆಯ ಅಥವಾ ಸ್ಥಳೀಯ ಪೆÇಲೀಸ್ ಅಧಿಕಾರಿಗಳ ಗಮನಕ್ಕೆ ತರದೇ ಒಕ್ಕೂಟ ವ್ಯವಸ್ಥೆಯ ಎಲ್ಲಾ ಪದ್ಧತಿಗಳಿಗೆ ತಿಲಾಂಜಲಿ ನೀಡಿ ಪರಿಸರ ಹೋರಾಗಾರ್ತಿ ದಿಶಾ ರವಿಯನ್ನು ದೆಹಲಿ ಪೆÇಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಇದೊಂದು ರಾಜ್ಯದ ಪೆÇಲೀಸ್ ಇಲಾಖೆಗೆ ಅವಮಾನವಾಗಿದ್ದು ಇದರ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡಬೇಕಿದ್ದ ಗೃಹ ಸಚಿವರು ಸರ್ವಾಧಿಕಾರಿ ಮೋದಿಯ ಮುಂದೆ ಮೂಗನಂತಾಗಿದ್ದಾರೆ. ಸರಕಾರ ತಕ್ಷಣ ದಿಶಾ ರವಿಯನ್ನು ಬಿಡುಗಡೆ ಮಾಡಬೇಕು ಹಾಗೂ ದೇಶ ವಿರೋಧಿ ಕೃಷಿ ಕಾಯ್ದೆಯನ್ನು ವಾಪಾಸ್ಸು ಪಡೆದು ದೇಶದ ರೈತರ ಹಿತಕಾಯಲು ಮುಂದಾಗಬೇಕು ಎಂದು ಆಗ್ರಹಿಸಿದರು. ಡಿವೈಎಫ್‍ಐ ಪ್ರಮುಖರಾದ ನವೀನ್ ಕೊಂಚಾಡಿ, ನೌಶಾದ್ ಬೆಂಗ್ರೆ, ಸುನಿಲ್ ತೇವುಲ, ವರಪ್ರಸಾದ್ ಬಜಾಲ್, ಪ್ರಮೀಳಾ ದೇವಾಡಿಗ, ಅಸುಂತಾ ಡಿಸೋಜಾ, ವಿನೀತ್ ದೇವಾಡಿಗ, ಸಿನಾನ್ ಬೆಂಗ್ರೆ, ತಿಲಕ್ ಕುತ್ತಾರ್, ಸಾಮಾಜಿಕ ಕಾರ್ಯಕರ್ತ ಆಲ್ವಿನ್ ಮೊದಲಾದವರು ಭಾಗವಹಿಸಿದ್ದರು.
  • Blogger Comments
  • Facebook Comments

0 comments:

Post a Comment

Item Reviewed: ಕೇಂದ್ರ ಸರಕಾರದ ಸರ್ವಾಧಿಕಾರಿ ಧೋರಣೆಯನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಂತೋಷ್ ಬಜಾಲ್ ಸವಾಲು Rating: 5 Reviewed By: karavali Times
Scroll to Top