ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಕೊನೆ ದಿನಾಂಕ ಮಾರ್ಚ್ 31 : ಲಿಂಕ್ ಮಾಡದಿದ್ದಲ್ಲಿ ದಂಡದ ಜೊತೆಗೆ ಪ್ಯಾನ್ ಕಾರ್ಡ್ ಅಮಾನತು - Karavali Times ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಕೊನೆ ದಿನಾಂಕ ಮಾರ್ಚ್ 31 : ಲಿಂಕ್ ಮಾಡದಿದ್ದಲ್ಲಿ ದಂಡದ ಜೊತೆಗೆ ಪ್ಯಾನ್ ಕಾರ್ಡ್ ಅಮಾನತು - Karavali Times

728x90

31 March 2021

ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಕೊನೆ ದಿನಾಂಕ ಮಾರ್ಚ್ 31 : ಲಿಂಕ್ ಮಾಡದಿದ್ದಲ್ಲಿ ದಂಡದ ಜೊತೆಗೆ ಪ್ಯಾನ್ ಕಾರ್ಡ್ ಅಮಾನತು


ನವದೆಹಲಿ, ಮಾ. 31, 2021 (ಕರಾವಳಿ ಟೈಮ್ಸ್) : ಪ್ರತಿಯೊಬ್ಬ ಭಾರತೀಯ ನಾಗರಿಕ ಕೂಡಾ ಸೆಕ್ಷನ್ 139ಎಎ ಪ್ರಕಾರ ತನ್ನ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಬೇಕು ಎಂದು ಆದಾಯ ತೆರಿಗೆ ಇಲಾಖೆ ಈ ಹಿಂದೆ ಆದೇಶ ಹೊರಡಿಸಿತ್ತು. ಸದ್ರಿ ಆದೇಶದಂತೆ ಕೊನೆ ದಿನಾಂಕ 2021 ರ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಇಂದಿನ ತನಕ ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಿಸದೆ ಇದ್ದಲ್ಲಿ 1,000/- ರೂಪಾಯಿ ದಂಡ ವಿಧಿಸುದಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಆದಾಯ ತೆರಿಗೆ ಇಲಾಖೆ ತಿಳಿಸಿರುವ ಪ್ರಕಾರ ಈಗಾಗಲೇ ಕೊಟ್ಟಿರುವ ಕಾಲಾವಕಾಶದ ಒಳಗಾಗಿ ಯಾರೂ ತಮ್ಮ ಪ್ಯಾನ್‍ಕಾರ್ಡಿಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡದೆ ಇರುತ್ತಾರೋ ಅಂತವರಿಗೆ 1 ಸಾವಿರ ರೂಪಾಯಿ ದಂಡ ಹಾಕಿ ಅವರ ಪ್ಯಾನ್ ಕಾರ್ಡನ್ನು ಅಮಾನ್ಯಗೊಳಿಸಲಾಗುವುದು ಎಂದು ತಿಳಿಸಿದೆ.

2021ನೇ ಹಣಕಾಸು ಮಸೂದೆಯಲ್ಲಿ ಹೊಸ ಸೆಕ್ಷನ್ 234ನ್ನು ಆದಾಯ ತೆರಿಗೆ ಕಾಯ್ದೆಯಾಗಿ ರೂಪುಗೊಳಿಸಲಾಗಿದ್ದು, ಇದರ ಪ್ರಕಾರ ಮಾರ್ಚ್ 31ರ ಒಳಗಾಗಿ ಪ್ಯಾನ್ ಕಾರ್ಡ್‍ಗೆ ಆಧಾರ್ ಲಿಂಕ್ ಮಾಡದೆ ಇದ್ದರೆ ಅಂತವರಿಗೆ ದಂಡ ವಿಧಿಸಲಾಗುವುದು ಮತ್ತು ಪ್ಯಾನ್ ಕಾರ್ಡ್ ಅಮಾನ್ಯಗೊಳಿಸಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಸೂಚಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ಪ್ಯಾನ್ ಕಾರ್ಡಿಗೆ ಆಧಾರ್ ಲಿಂಕ್ ಕೊನೆ ದಿನಾಂಕ ಮಾರ್ಚ್ 31 : ಲಿಂಕ್ ಮಾಡದಿದ್ದಲ್ಲಿ ದಂಡದ ಜೊತೆಗೆ ಪ್ಯಾನ್ ಕಾರ್ಡ್ ಅಮಾನತು Rating: 5 Reviewed By: karavali Times
Scroll to Top