ಬಂಟ್ವಾಳ, ಮಾ. 12, 2021 (ಕರಾವಳಿ ಟೈಮ್ಸ್) : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಕಬ್ಬಿಣ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ಮೀರಿ ಉರುಳಿ ಬಿದ್ದ ಘಟನೆ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆ ಕಬ್ಬಿಣದ ರಾಡ್ ಗಳನ್ನು ತುಂಬಿಕೊಂಡು ಬರುತ್ತಿದ್ದ ಲಾರಿ ಬುಡೋಳಿ ಸಮೀಪ ಚಾಲಕನ ನಿಯಂತ್ರಣ ಮೀರಿ ಹೆದ್ದಾರಿಯಲ್ಲೇ ಉರುಳಿ ಬಿದ್ದಿದೆ. ಪರಿಣಾಮ ಲಾರಿ ಚಾಲಕ ಅಲ್ಪ ಪ್ರಮಾಣದಲ್ಲಿ ಗಾಯಗೊಂಡಿದ್ದು, ಕಬ್ಬಿಣದ ರಾಡ್ ಗಳು ಹೆದ್ದಾರಿಯಲ್ಲೇ ಬಿದ್ದಿದ್ದರಿಂದ ಕೆಲ ಕಾಲ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯಗೊಂಡಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಹೆದ್ದಾರಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.
0 comments:
Post a Comment