ಬಂಟ್ವಾಳ, ಮಾ. 23, 2021 (ಕರಾವಳಿ ಟೈಮ್ಸ್) : ತಾಲೂಕಿನ ಕೊರೊನಾ ಜಾಗೃತಿ ಸಭೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಕೊರೋನಾ ಒಂದನೇ ಆಲೆ ಕಡಿಮೆಯಾಗಿ ಎರಡನೇ ಅಲೆ ಪ್ರಾರಂಭವಾಗಿದ್ದು ಈಗಾಗಲೇ ರಚಿಸಿರುವ ಟಾಸ್ಕ್ ಫೆÇೀರ್ಸ್ ಸಮಿತಿಗಳು ಇನ್ನು ಮುಂದೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು. ಬಂಟ್ವಾಳ ತಾಲೂಕು ಗಡಿ ಭಾಗದ ಪ್ರದೇಶಗಳನ್ನು ಒಳಗೊಂಡಿರುವುದರಿಂದ ಹೆಚ್ಚು ನಿಗಾ ವಹಿಸಬೇಕು. ಹೊರ ದೇಶಗಳಿಂದ ಬರುವ ಪ್ರಯಾಣಿಕರು ಇರುವ ಮನೆಗಳಿಗೆ ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಜಾಗೃತಿ ಮೂಡಿಸಬೇಕು ಎಂದರು.
ಇದೇ ವೇಳೇ ಮಾತನಾಡಿದ ತಾಲೂಕು ಕಛೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್ ಮಾತನಾಡಿ 60 ವರ್ಷ ಮೇಲ್ಪಟ್ಟವರು ಹಾಗೂ 45-59 ವರ್ಷದೊಳಗಿನ ಇತರ ಕಾಯಿಲೆಯಿಂದ ಬಳಲುತ್ತಿರುವವರು ಭಯ ಪಡದೆ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಕೊರನಾದಿಂದ ಲಾಕ್ ಡೌನ್ ಆಗದ ರೀತಿಯಲ್ಲಿ ಇಂದಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಆಶಾ ಕಾರ್ಯಕರ್ತೆಯರು ಕೊರೋನಾ ಮುಂಜಾಗ್ರತೆಯ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ತಾಲೂಕು ಕಛೇರಿ ಸಿಬ್ಬಂದಿಗಳು, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ, ವಂದಿಸಿದರು.
0 comments:
Post a Comment