ಬೆಂಗಳೂರು, ಮಾ. 19, 2021 (ಕರಾವಳಿ ಟೈಮ್ಸ್) : ಮಾಜಿ ಸಚಿವ ಎಚ್.ಟಿ. ಕೃಷ್ಣಪ್ಪ (92) ಅವರು ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ದಿ. ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಆರೋಗ್ಯ, ರೇಷ್ಮೆ, ಅಬಕಾರಿ ಖಾತೆ ಸಚಿವರಾಗಿದ್ದ ಕೃಷ್ಣಪ್ಪ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ಬಿಟಿ ಬಡಾವಣೆಯ ಹೇಮಾವತಿ ಕ್ವಾಟ್ರಸ್ ಮುಂಭಾಗದಲ್ಲಿರುವ ಅವರ ಜಮೀನಿನಲ್ಲೇ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕೃಷ್ಣಪ್ಪ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
0 comments:
Post a Comment