ಮಾ 15-16 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ : 4 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತ - Karavali Times ಮಾ 15-16 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ : 4 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತ - Karavali Times

728x90

11 March 2021

ಮಾ 15-16 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ : 4 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತ

ನವದೆಹಲಿ, ಮಾ. 12, 2021 (ಕರಾವಳಿ ಟೈಮ್ಸ್) : ಸಾರ್ವಜನಿಕ ವಲಯದ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಎಸ್.ಬಿ.ಐ. ನೇತೃತ್ವದ ಯುನೈಟೆಡ್ ಫೆÇೀರಂ ಆಫ್ ಬ್ಯಾಂಕ್ ಯೂನಿಯನ್ ಮಾ. 15 ಹಾಗೂ 16 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದ್ದು, ಈ ಹಿನ್ನಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್ ಸೇವೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಶುಕ್ರವಾರವೇ ತಮ್ಮೆಲ್ಲಾ ಬ್ಯಾಂಕ್ ಸೇವೆಗಳನ್ನು ಪೂರೈಸುವ ಅನಿವಾರ್ಯತೆ ಎದುರಾಗಿದೆ. 

ಇತ್ತೀಚಿಗೆ ನಡೆದ ಸಂಧಾನ ಸಭೆಯಲ್ಲಿ ಯಾವುದೇ ರೀತಿ ಸಕಾರಾತ್ಮಕ ಸ್ಪಂದನೆ ದೊರೆಯದ ಹಿನ್ನಲೆಯಲ್ಲಿ ಮಾರ್ಚ್ 15 ಹಾಗೂ 16 ರಂದು ಸುಮಾರು 10 ಲಕ್ಷ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ತಿಳಿಸಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಮರುಪರಿಶೀಲಿಸಲು ಒಂದು ವೇಳೆ ಸರಕಾರ ಒಪ್ಪಿದರೆ ಮುಷ್ಕರವನ್ನು ಮರುಪರಿಶೀಲಿಸುವುದಾಗಿಯೂ ಸಂಘ ಇದೇ ವೇಳೆ ಸ್ಪಷ್ಟಪಡಿಸಿದೆ. 

ಮಾರ್ಚ್ 13 ಎರಡನೇ ಶನಿವಾರ, ಮಾ 14 ಭಾನುವಾರ ರಜಾ ದಿನಗಳಾಗಿದ್ದು, ಮಾ 15 ಹಾಗೂ 16 ರಂದು ಬ್ಯಾಂಕ್ ಮುಷ್ಕರ ಇರುವುದರಿಂದ ಸಾರ್ವಜನಿಕರಿಗೆ 4 ದಿನಗಳ ಕಾಲ ಬ್ಯಾಂಕ್ ಸೇವೆ ಸ್ಥಗಿತಗೊಳ್ಳಲಿದೆ. 

ಕಳೆದ ಫೆಬ್ರವರಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ದೇಶದಲ್ಲಿ 1.75 ಲಕ್ಷ ಕೋಟಿ ರೂಪಾಯಿ ಗಳಿಸುವ ಸರಕಾರದ ಹೂಡಿಕೆಯ ಭಾಗವಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದಾಗಿ ಘೋಷಿಸಿದ್ದರು. ಕೇಂದ್ರ ಸರಕಾರವು ಕಳೆದ ವರ್ಷ 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಬ್ಯಾಂಕ್‍ಗಳೊಂದಿಗೆ ವಿಲೀನಗೊಳಿಸಿತ್ತು. 2017 ರಲ್ಲಿ 27 ಇದ್ದ ಸಾರ್ವಜನಿಕರ ಬ್ಯಾಂಕುಗಳ ಸಂಖ್ಯೆ ಇದೀಗ ಇದೀಗ ಮಾರ್ಚ್ ವೇಳೆಗೆ 12ಕ್ಕೆ ಇಳಿದಿದೆ. ಈ ಕಾರಣಕ್ಕಾಗಿ ಬ್ಯಾಂಕ್ ನೌಕರರ ಸಂಘ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.  

  • Blogger Comments
  • Facebook Comments

0 comments:

Post a Comment

Item Reviewed: ಮಾ 15-16 ರಂದು ಬ್ಯಾಂಕ್ ಮುಷ್ಕರಕ್ಕೆ ಕರೆ : 4 ದಿನ ಬ್ಯಾಂಕಿಂಗ್ ಸೇವೆ ಸ್ಥಗಿತ Rating: 5 Reviewed By: karavali Times
Scroll to Top