ಬಂಟ್ವಾಳ, ಮಾ. 27, 2021 (ಕರಾವಳಿ ಟೈಮ್ಸ್) : ತಾಲೂಕಿನ ಮಾಣಿ ಸಮೀಪದ ಕೊಡಾಜೆ-ಮಠ ಎಂಬಲ್ಲಿ ಶನಿವಾರ ಬೆಳಿಗ್ಗೆ ಆಟೋ ರಿಕ್ಷಾ ಹಾಗೂ ಕಾರು ನಡುವೆ ಅಪಘಾತದಲ್ಲಿ ಅಟೋ ಚಾಲಕ ಕೊಡಾಜೆ-ಪಂತಡ್ಕ ನಿವಾಸಿ ಹಮೀದ್ ಯಾನೆ ಅಮ್ಮಿ (35) ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಅವರ ಪತ್ನಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಣಿ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಚಾಲಕ ಹಮೀದ್ ಅವರ ನಿಯಂತ್ರಣ ತಪ್ಪಿ ಎದುರಿನಿಂದ ಮಾಣಿಯಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿಯಾಗಿ ರಸ್ತೆಯಲ್ಲೇ ರಿಕ್ಷಾ ಉರುಳಿ ಬಿದ್ದು ಈ ಅವಘಡ ಸಂಭವಿಸಿದೆ. ಅಪಘಾತಕ್ಕೆ ಅಟೋ ರಿಕ್ಷಾದ ಬ್ರೇಕ್ ವೈಫಲ್ಯ ಕಾರಣ ಎನ್ನಲಾಗುತ್ತಿದೆ.
ಅಪಘಾತದ ತೀವ್ರತೆಗೆ ಅಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡಾ ಜಖಂಗೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
0 comments:
Post a Comment