ಬಂಟ್ವಾಳ, ಮಾ. 30, 2021 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಸೋಮವಾರ ರಾತ್ರಿ ಗಾಳಿ, ಸಿಡಲು-ಮಿಂಚು ಸಹಿತ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ತಾಲೂಕಿನ ಬಿ ಮೂಡ ಗ್ರಾಮದ ಕಾಮಾಜೆ, ದೈಪಲ, ಮೈರನ್‍ಪಾದೆ ಮೊದಲಾದೆಡೆಗಳ ಸುಮಾರು 30ಕ್ಕೂ ಅಧಿಕ ಮನೆಗಳಿಗೆ ಹಾನಿ ಸಂಭವಿಸಿದೆ. ಈ ಪೈಕಿ 2 ಮನೆಗಳಿಗೆ ತೀವ್ರ ರೂಪದ ಹಾನಿ ಸಂಭವಿಸಿದೆ. ಘಟನಾ ಸ್ಥಳಗಳಿಗೆ ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆ ಹಾನಿಯಿಂದ ಒಟ್ಟು 3 ಲಕ್ಷದ 53 ಸಾವಿರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಪ್ರಾಥಮಿಕ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಇದೇ ಅಲ್ಲದೆ ಇನ್ನೂ ಹಲವೆಡೆ ಮಳೆ ಹಾನಿ ಸಂಭವಿಸಿದ್ದು, ಅಧಿಕೃತ ವರದಿ ಇನ್ನಷ್ಟೇ ಆಗಬೇಕಿದೆ. ಅಲ್ಲಲ್ಲಿ ವಿದ್ಯುತ್ ಕಂಬಗಳು ಧರೆಗುಳಿದ ಪರಿಣಾಮ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು. ಮಂಗಳವಾರ ಬೆಳಿಗ್ಗೆ ಹಾಗೂ ಮಧ್ಯಾಹ್ನದ ವೇಳೆಗೆ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾನಿ ಪತ್ತೆ ಹಚ್ಚಿ ವಿದ್ಯುತ್ ಸರಬರಾಜು ಮರು ಸಂಪರ್ಕಕ್ಕೆ ವ್ಯವಸ್ಥೆ ಮಾಡಿದ್ದಾರೆ.
0 comments:
Post a Comment