ಬೆಂಗಳೂರು, ಮಾ. 02, 2021 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ಎನ್.ಎಸ್.ಪಿ. (ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್) ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಇದೀಗ ಎಸ್.ಎಸ್.ಪಿ. (ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್) ಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು, ಇದೀಗ ಅರ್ಜಿ ಸಲ್ಲಿಸಲು ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಇದೇ ಮಾರ್ಚ್ 31, 2021 ಆಗಿರುತ್ತದೆ ಎಂದು ರಾಜ್ಯ ಅಲ್ಪಸಂಖ್ಯಾತ ಇಲಾಖಾ ಪ್ರಕಟಣೆ ತಿಳಿಸಿದೆ.
2 March 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment