ಬಂಟ್ವಾಳ, ಮಾ. 21, 2021 (ಕರಾವಳಿ ಟೈಮ್ಸ್) : ತಾಲೂಕಿನ ಸರಪಾಡಿ-ಅಲ್ಲಿಪಾಡಿ ಯುವ ಕಾಂಗ್ರೆಸ್ ಹಾಗೂ ರಮಾನಾಥ ರೈ ಅಭಿಮಾನಿ ಬಳಗದ ವತಿಯಿಂದ ಇಲ್ಲಿನ ಯುಗ ಫ್ರೆಂಡ್ಸ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಹೊನಲು ಬೆಳಕಿನ 7 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವನ್ನು ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು.
ಇದೇ ವೇಳೆ ಪಂಚಾಯತ್ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಿಗೆ ಸನ್ಮಾನಿಸಿಲಾಯಿತು. ಈ ಸಂದರ್ಭ ಜಿ.ಪಂ. ಸದಸ್ಯ ಬಿ ಪದ್ಮಶೇಖರ್ ಜೈನ್, ತಾ ಪಂ ಸದಸ್ಯೆ ಸಪ್ನ ವಿಶ್ವನಾಥ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ನಾವೂರು ಗ್ರಾ ಪಂ ಉಪಾಧ್ಯಕ್ಷೆ ಲವೀನಾ ಮೋರಸ್, ಸರಪಾಡಿ ಗ್ರಾ ಪಂ ಮಾಜಿ ಅಧ್ಯಕ್ಷ ಧರ್ಮಪ್ಪ ಪೂಜಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ವಿನ್ಸೆಂಟ್ ಪಿಂಟೋ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment