ಬಂಟ್ವಾಳ, ಮಾ. 06, 2021 (ಕರಾವಳಿ ಟೈಮ್ಸ್) : ಕರ್ನಾಟಕ ಟೈಲರ್ಸ್ ಎಸೋಸಿಯೇಶನ್ (ರಿ) ಮಂಗಳೂರು ಇದರ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಸಂಸ್ಥಾಪನ ದಿನಾಚರಣೆ ಹಾಗೂ ಅಶಕ್ತರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 7 ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರಲ್ಲಿ ನಡೆಯಲಿದೆ.
ಕೆ.ಎಸ್.ಟಿ.ಎ. ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಈಶ್ವರ ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಕೆ.ಎಸ್.ಟಿ.ಎ. ರಾಜ್ಯ ಉಪಾಧ್ಯಕ್ಷ ಹಾಗೂ ಕಟ್ಟಡ ಸಮಿತಿ ಸಂಚಾಲಕ ಸುರೇಶ್ ಸಾಲ್ಯಾನ್, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅಂಗಡಿ, ಉದ್ಯಮಿ ಡಾ. ಗೋಪಾಲಕೃಷ್ಣ ಆಚಾರ್ಯ, ಬಂಟ್ವಾಳ ತಾಲೂಕು ಅಧ್ಯಕ್ಷ ಯುವ ವಾಹಿನಿ ಅಧ್ಯಕ್ಷ ಸುಂದರ ಪೂಜಾರಿ ಬೋಳಂಗಡಿ, ವರ್ತಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ ಜನಾರ್ಧನ ಟೈಲರ್ ಬೊಂಡಾಲ, ನರಿಕೊಂಬು ಗ್ರಾ ಪಂ ಸದಸ್ಯ ಪುರುಷೋತ್ತಮ ಎಸ್. ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕೆ.ಎಸ್.ಟಿ.ಎ. ಪ್ರಕಟಣೆ ತಿಳಿಸಿದೆ.
0 comments:
Post a Comment