ನವದೆಹಲಿ, ಮಾ 27, 2021 (ಕರಾವಳಿ ಟೈಮ್ಸ್) : ಕೊರೊನಾ ಸಾಂಕ್ರಾಮಿಕ ರೋಗ ಹಾಗೂ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರಕಾರ ವಾಹನ ದಾಖಲೆಗಳಿಗೆ ಸಂಬಂಧಿಸಿದಂತೆ ಅವಧಿಯನ್ನು ವಿಸ್ತರಿಸಿ ಮತ್ತೆ ಆದೇಶ ಹೊರಡಿಸಿದೆ. ವಾಹನ ದಾಖಲೆಗಳಾದ ಚಾಲನಾ ಪರವಾನಗಿ (ಡಿಎಲ್), ನೋಂದಣಿ ಪ್ರಮಾಣ ಪತ್ರ (ಆರ್.ಸಿ.) ಸಹಿತ ವಾಹನ ಪರ್ಮಿಟ್‍ಗಳ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಿ ಕೇಂದ್ರ ಸರಕಾರ ಮರು ಆದೇಶ ಹೊರಡಿಸಿದೆ.
ಈಗಾಗಲೇ ಈ ಬಗ್ಗೆ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದೆ. ವಾಹನಗಳ ಫಿಟ್ನೆಸ್, ಪರ್ಮಿಟ್, ಡ್ರೈವಿಂಗ್ ಲೈಸೆನ್ಸ್, ರಿಜಿಸ್ಟ್ರೇಶನ್ ಹಾಗೂ ಇತರ ದಾಖಲೆಗಳಿಗೆ ಸಂಬಂಧಿಸಿದಂತೆ ಕೊರೋನಾ ಕಾರಣಕ್ಕಾಗಿ ಫೆಬ್ರವರಿ 1, 2020 ರಿಂದ ಮಾರ್ಚ್ 21, 2021ರೊಳಗೆ ಅವಧಿ ಮುಗಿಯುವ ದಾಖಲೆಗಳಿಗೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಸಚಿವಾಲಯ ಹೇಳಿದೆ.
ಕೊರೊನಾ 2ನೇ ಅಲೆ ಪ್ರಕರಣಗಳು ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ಅರ್ಜಿ ಸಲ್ಲಿಸಿದವರಿಗೆ ಕೊರೊನಾ ಕಾರಣದಿಂದಾಗಿ ದಾಖಲೆಗಳನ್ನು ನವೀಕರಿಸುವಲ್ಲಿ ವಿಳಂಬವಾಗಿದ್ದು, ಇವುಗಳಿಗೂ ಫೆಬ್ರವರಿ 1ಕ್ಕೆ ಮುಕ್ತಾಯಗೊಳ್ಳುವ ದಾಖಲೆಗಳ ಅವಧಿಯನ್ನು ಜೂನ್ 30ರವರೆಗೆ ಮಾನ್ಯವೆಂದು ಪರಿಗಣಿಸಬಹದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೊರೊನಾ ಸಂಕಷ್ಟದ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗರಿಕರು, ವಾಹನ ಸವಾರರು, ಇತರ ಸಂಸ್ಥೆಗಳಿಗೆ ದಾಖಲೆಗಳ ಕುರಿತು ಕಿರುಕುಳ, ತೊಂದರೆ ನೀಡದೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಈ ಆದೇಶವನ್ನು ಜಾರಿಗೆ ತರುವಂತೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಸೂಚಿಸಿದೆ.
0 comments:
Post a Comment