ಬಂಟ್ವಾಳ, ಮಾ. 29, 2021 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಎಂಬಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ವೇಳೆ ಅಪ್ರಾಪ್ತ ಬಾಲಕಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಬಕ ನಿವಾಸಿ ಹಮೀದ್ ಮೌಲಾ ಎಂಬಾತನನ್ನು ವಿಟ್ಲ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಮಾ 27 ರಂದು ರಾತ್ರಿ ಸುಮಾರು 10:30 ರ ವೇಳೆಗೆ ಇಡ್ಕಿದು ಎಂಬಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದಕ್ಕೆ ತನ್ನ ಹೆತ್ತವರೊಂದಿಗೆ ತೆರಳಿದ್ದ ಅಪ್ರಾಪ್ತ ಪ್ರಾಯದ ಬಾಲಕನನ್ನು ಆರೋಪಿ ಪುಸಲಾಯಿಸಿ ಕಾರ್ಯಕ್ರಮವಾಗುತ್ತಿದ್ದ ಸ್ಥಳದ ಬಳಿ ಇದ್ದ ಮನೆಯೊಂದರ ಬಳಿಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಬಾಲಕ ಅಲ್ಲಿಂದ ತಪ್ಪಿಸಿಕೊಂಡು ಬಂದು ಹೆತ್ತವರೊಂದಿಗೆ ವಿಷಯ ತಿಳಿಸಿದ ಹಿನ್ನಲೆಯಲ್ಲಿ ಬಾಲಕನ ತಂದೆ ನೀಡಿದ ದೂರಿನಂತೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಕಲಂ 7,8 ಫೆÇೀಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment