ಉಪ್ಪಿನಂಗಡಿ, ಮಾ. 25, 2021 (ಕರಾವಳಿ ಟೈಮ್ಸ್) : ಕಡಬ ತಾಲೂಕಿನ ಕೌಕ್ರೌಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಗೂಡ್ಸ್ ಹೇರಿಕೊಂಡು ಬರುತ್ತಿದ್ದ ಕ್ಯಾಂಟರ್ ಗೂಡ್ಸ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ಬೆಂಕಿ ಹೊತ್ತಿಕೊಂಡು ಉರಿದಿದ್ದು, ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.
ಎರಡೂ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಎರಡೂ ವಾಹನಗಳು ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಲಾರಿ ಚಾಲಕ ಬೆಂಕಿಯ ಮಧ್ಯದಿಂದ ಹೊರಬರಲಾಗದೆ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.
0 comments:
Post a Comment