ಬಂಟ್ವಾಳ, ಮಾ. 29, 2021 (ಕರಾವಳಿ ಟೈಮ್ಸ್) : ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಾಡಿ ಎಂಬಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಕೇಂದ್ರಕ್ಕೆ ಭಾನುವಾರ ಸಂಜೆ ದಾಳಿ ನಡೆಸಿದ ಪೊಲೀಸರು ಆರೋಪಿ ಮೂಡನಡುಗೋಡು ನಿವಾಸಿ ಸತೀಶ್ ಕುಮಾರ್ (36) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಭಾನುವಾರ ಸಂಜೆ ಸುಮಾರು 7 ಗಂಟೆ ವೇಳೆಗೆ ಬಂಟ್ವಾಳ ನಗರ ಪೆÇಲೀಸರು ಈ ದಾಳಿ ಸಂಘಟಿಸಿದ್ದು, ಅಲ್ಲಿ ಗಿರಾಕಿಗಳನ್ನು ಮತ್ತು ಮಹಿಳೆಯರನ್ನು ಕರೆಯಿಸಿಕೊಂಡು ವೇಶ್ಯಾವಾಟಿಕೆ ನಡೆಸಿ ಹಣವನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ದಾಳಿ ನಡೆಸಿದ ಮನೆಯನ್ನು ಪೊಲೀಸರು ತಪಾಸಣೆ ನಡೆಸಿದ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಮಹಿಳೆಯರು ಕಂಡು ಬಂದಿದ್ದಾರೆ. ವೇಶ್ಯಾವಾಟಿಕೆಯಿಂದ ಸಂಗ್ರಹವಾದ 6 ಸಾವಿರ ರೂಪಾಯಿ ನಗದು ಹಣ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ಇತರ ಸಾಮಾಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಕಲಂ 03, 04, 05 (ಡಿ) ಅನೈತಿಕ ವ್ಯವಹಾರ ಪ್ರತಿಬಂಧಕ ಅಧಿನಿಯಮ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment