ಬಂಟ್ವಾಳ, ಮಾ. 30, 2021 (ಕರಾವಳಿ ಟೈಮ್ಸ್) : ತಾಲೂಕಿನ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ರಸ್ತೆಯಲ್ಲಿರುವ ಬಿರ್ರುಲ್ ವಾಲಿದೈನ್ ಮಸೀದಿಗೆ ಸೋಮವಾರ ರಾತ್ರಿ ನುಗ್ಗಿದ ದುಷ್ಕರ್ಮಿಗಳ ತಂಡ ಇಲ್ಲಿನ ಧರ್ಮಗುರು, ಕುಂದಾಪುರ ಮೂಲದ ನಿವಾಸಿ ಮುಶ್ತಾಕ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂದು ಮಸೀದಿ ಅಧ್ಯಕ್ಷ ಸೆಯ್ಯದ್ ಬಾವಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.
ದುಷ್ಕರ್ಮಿಗಳ ಹಲ್ಲೆಯಿಂದ ತಪ್ಪಿಸಿಕೊಳ್ಳಲು ಓಡಿದ ಧರ್ಮಗುರು ಬಿದ್ದು ಕಾಲಿಗೆ ಗಾಯವಾಗಿದ್ದು, ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿ 12 ಗಂಟೆಯ ಸುಮಾರಿಗೆ ಮಸೀದಿಗೆ ನುಗ್ಗಿರುವ ಮೂರು ಮಂದಿ ಇದ್ದ ತಂಡ ಮಸೀದಿಯ 2ನೇ ಮಹಡಿಯಲ್ಲಿ ಮಲಗಿದ್ದ ಧರ್ಮ ಗುರು ಮುಶ್ತಾಕ್ ಅವರ ಕತ್ತು ಹಿಡಿದು ಹಲ್ಲೆ ನಡೆಸಿದೆ. ಈ ವೇಳೆ ಅವರು ದುಷ್ಕರ್ಮಿಗಳನ್ನು ದೂಡಿ ಹಾಕಿ ತಪ್ಪಿಸಿಕೊಂಡು ಕೆಳ ಅಂತಸ್ತಿಗೆ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೆÇಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಮಸೀದಿಯ ಸಿಸಿ ಕೆಮರಾದಲ್ಲಿ ದಾಖಲಾಗಿರುವ ಫೂಟೇಜ್ ಆಧರಿಸಿ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
0 comments:
Post a Comment