ಬೆಂಗಳೂರು, ಎಪ್ರಿಲ್ 25, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 28 ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ ಪರೀಕ್ಷೆ ಮುಗಿದ ಬಳಿಕ ಪ್ರಾಯೋಗಿಕ ಪರೀಕ್ಷೆ ತೆಗೆದುಕೊಳ್ಳುವ ನಿರ್ಧಾರ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತ ಕಾಯುವುದಕ್ಕೆ ಸರ್ಕಾರ ಬದ್ದ ಎಂದು ಆದೇಶದಲ್ಲಿ ಹೇಳಲಾಗಿದೆ.
ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರೊಂದಿಗೆ ಅಧಿಕಾರಿ ಹಂತದ ಸುಧೀರ್ಘ ಚರ್ಚೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ಮುಂದುವರಿಸಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕಿವಿಮಾತು ಹೇಳಿದ್ದಾರೆ.
0 comments:
Post a Comment