ಬಂಟ್ವಾಳ, ಬಂಟ್ವಾಳ, ಎಪ್ರಿಲ್ 06, 2021 (ಕರಾವಳಿ ಟೈಮ್ಸ್) : ತಾಲೂಕಿನ ಪಾಣೆಮಂಗಳೂರು ಹಾಗೂ ಬಂಟ್ವಾಳ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಮಳೆ ಸಂದರ್ಭ ಹಾನಿಗೀಡಾದ 62 ಮನೆಗಳ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪ ನಿಧಿಯಡಿ 6.34 ಲಕ್ಷ ರೂಪಾಯಿ ಪರಿಹಾರದ ಚೆಕ್‍ಗಳನ್ನು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಮಂಗಳವಾರ ಶಾಸಕರ ಕಚೇರಿಯಲ್ಲಿ ಹಸಂತ್ತಾರಿಸಿದರು.
ಈ ಸಂಧರ್ಭ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಪ್ರಮುಖರಾದ ಹರ್ಷಿಣಿ ಪುಷ್ಪಾನಂದ, ಸುಜಾತ ಪೂಜಾರಿ, ಪುರಸಭೆ ಸದಸ್ಯರಾದ ಜಯಂತಿ, ಶೋಭಾವತಿ, ಮೀನಾಕ್ಷಿ ಗೌಡ, ಎಪಿಎಂಸಿ ಅಧ್ಯಕ್ಷ ನೇಮಿರಾಜ ರೈ, ಲಕ್ಷ್ಮೀನಾರಾಯಣ ಹೆಗ್ಡೆ, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಗ್ರಾಮಕರಣೀಕರಾದ ಪ್ರದೀಪ್, ಪ್ರಶಾಂತ್, ಕುಮಾರ್ ಟಿ.ಸಿ. ಯಶ್ವಿತ ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment