ಕೋವಿಡ್ ನಿಯಂತ್ರಣದ ಭಾಗವಾಗಿ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ - Karavali Times ಕೋವಿಡ್ ನಿಯಂತ್ರಣದ ಭಾಗವಾಗಿ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ - Karavali Times

728x90

14 April 2021

ಕೋವಿಡ್ ನಿಯಂತ್ರಣದ ಭಾಗವಾಗಿ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ


ನವದೆಹಲಿ, ಎಪ್ರಿಲ್ 14, 2021 (ಕರಾವಳಿ ಟೈಮ್ಸ್) : ದೇಶದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ)) 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು ಹನ್ನೆರಡನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. 

10ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಮಂಡಳಿ ನಿಗದಿಪಡಿಸಿದ ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶವನ್ನು ಘೋಷಿಸಲಾಗುವುದು ಹಾಗೂ 12ನೇ ತರಗತಿಯ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವಾಲಯದ (ಎಂಒಇ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಕಗಳ ಬಗ್ಗೆ ಅಸಮಾಧಾನವಿರುವ ಯಾವುದೇ ಅಭ್ಯರ್ಥಿಗೆ ಪರಿಸ್ಥಿತಿ ಅನುಕೂಲಕರವಾದಾಗ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗುವುದು. 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಜೂನ್ 1 ರ ನಂತರ ಪರಿಸ್ಥಿತಿಯ ಪರಿಶೀಲನೆ ನಡೆಸಿ  ಪರೀಕ್ಷೆಗಳನ್ನು ನಡೆಸುವ ಮೊದಲು ಕನಿಷ್ಠ 15 ದಿನಗಳ ಮುಂಚಿತವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. 

ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯನ್ನು ನಿಯಂತ್ರಿಸಲು ದೇಶಾದ್ಯಂತ ಕ್ರಮಗಳನ್ನು ಕೈಗೊಳ್ಳುತ್ತಿರುವಾಗಲೇ ಕೇಂದ್ರೀಯ ಶಿಕ್ಷಣ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ. ಸಿಬಿಎಸ್‍ಇ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಈ ಹಿಂದೆ ಅಭಿಯಾನವನ್ನು ಪ್ರಾರಂಭಿಸಿದ್ದರು. ಮೇ 4 ರಂದು ಪ್ರಾರಂಭವಾಗಲಿರುವ ಬೋರ್ಡ್ ಪರೀಕ್ಷೆಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೆÇೀಖ್ರಿಯಾಲ್ ಮತ್ತು ಇತರ ಹಿರಿಯ ಶಿಕ್ಷಣ ಅಧಿಕಾರಿಗಳನ್ನು ಭೇಟಿ ಮಾಡಿದ ನಂತರ ಈ ಪ್ರಕಟಣೆ ಹೊರಡಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಕೋವಿಡ್ ನಿಯಂತ್ರಣದ ಭಾಗವಾಗಿ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆಗಳು ಮುಂದೂಡಿಕೆ Rating: 5 Reviewed By: karavali Times
Scroll to Top