ನವದೆಹಲಿ, ಎಪ್ರಿಲ್ 30, 2021 (ಕರಾವಳಿ ಟೈಮ್ಸ್) : ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ನಿಷೇಧ ಮೇ 31 ರವರೆಗೆ ಮುಂದುವರಿದಿದೆ. ವಾಯುಯಾನ ನಿಯಂತ್ರಕ ಡಿಜಿಸಿಎ ಶುಕ್ರವಾರ ಈ ¨ಗ್ಗೆ ಪ್ರಕಟಣೆ ಹೊರಡಿಸಿದೆ. ಆದಾಗ್ಯೂ ಆಯ್ದ ಮಾರ್ಗಗಳಲ್ಲಿ ಸಮರ್ಥ ಪ್ರಾಧಿಕಾರವು ಕೇಸ್-ಟು-ಕೇಸ್ ಆಧಾರದ ಮೇಲೆ ನಿಗದಿತ ಅಂತರರಾಷ್ಟ್ರೀಯ ವಿಮಾನಗಳನ್ನು ಅನುಮತಿಸಬಹುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಹೇಳಿದೆ.
ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಕಾರಣ ಕಳೆದ ಮಾರ್ಚ್ 23 ರಿಂದ ಭಾರತದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಯಾನ ಸೇವೆ ಸ್ಥಗಿತಗೊಳಿಸಲಾಗಿದೆ. ಆದರೆ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈಯಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ವ್ಯವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ.
ಯುಎಸ್, ಯುಕೆ, ಯುಎಇ, ಕೀನ್ಯ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಸುಮಾರು 24 ದೇಶಗಳೊಂದಿಗೆ ಭಾರತ ಏರ್ ಬಬಲ್ಸ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನ ಏರ್ ಬಬಲ್ಸ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ತಮ್ಮ ತಮ್ಮ ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.
ಈ ನಿಷೇಧವು ಅಂತರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆಗಳು ಮತ್ತು ಅದರಿಂದ ನಿರ್ದಿಷ್ಟವಾಗಿ ಅನುಮೋದಿಸಲ್ಪಟ್ಟ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಡಿಜಿಸಿಎ ಸುತ್ತೋಲೆ ಹೇಳಿದೆ.
0 comments:
Post a Comment