ಮುಂಬೈ, ಎಪ್ರಿಲ್ 21, 2021 (ಕರಾವಳಿ ಟೈಮ್ಸ್) : ಮಹಾರಾಷ್ಟ್ರದ ನಾಸಿಕ್ ನಗರದ ಡಾ ಝಾಕಿರ್ ಹುಸೈನ್ ಆಸ್ಪತ್ರೆಯಲ್ಲಿ ಬುಧವಾರ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾದ ಪರಿಣಾಮ ಆಕ್ಸಿಜನ್ ಪೂರೈಕ್ ಸ್ಥಗಿತಗೊಂಡು ಚಿಕಿತ್ಸೆ ಪಡೆಯುತ್ತಿದ್ದ 22 ಮಂದಿ ರೋಗಿಗಳು ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಆಕ್ಸಿಜನ್ ಟ್ಯಾಂಕ್ ಲೀಕ್ ಆಗಿದ್ದರಿಂದ 30 ನಿಮಿಷ ಪೂರೈಕೆ ಸ್ಥಗಿತಗೊಂಡಿತ್ತು. ಪರಿಣಾಮ ಆಕ್ಸಿಜನ್ ವ್ಯವಸ್ಥೆಯಲ್ಲಿದ್ದ 22 ರೋಗಿಗಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 23 ರೋಗಿಗಳು ಆಕ್ಸಿಜನ್ ವೆಂಟಿಲೇಟರ್‍ನಲ್ಲಿದ್ದರು ಎನ್ನಲಾಗಿದೆ. ಆಸ್ಪತ್ರೆಯಲ್ಲಿದ್ದ 171 ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸದ್ಯ ಆಕ್ಸಿಜನ್ ಸೋರಿಕೆ ನಿಯಂತ್ರಿಸಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ನಾಸಿಕ್‍ನಲ್ಲಿ ಇದುವರೆಗೂ 2,56,586 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸದ್ಯ 44,279 ಜನ ಕೊರೊನಾಗೆ ಚಿಕಿತ್ಸೆಗೆ ಪಡೆದುಕೊಳ್ಳುತ್ತಿದ್ದಾರೆ. ಇದುವರೆಗೂ 2,672 ಜನ ಕೊರೋನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ, ದೆಹಲಿ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಕ್ಸಿಜನ್ ಮತ್ತು ಬೆಡ್ ಸಮಸ್ಯೆಯುಂಟಾಗಿದ್ದು, ಆತಂಕದ ಪರಿಸ್ಥಿತಿ ಎದುರಾಗಿದೆ.
ದೆಹಲಿಯಲ್ಲಿ ಆಮ್ಲಜನಕದ ಬಿಕ್ಕಟ್ಟು ವಿಪರೀತ ಹಂತ ತಲುಪಿದ್ದು, ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳಲ್ಲಿ ಆಮ್ಲಜನಕದ ಸಿಲಿಂಡರ್ ಬರಿದಾಗಲಿವೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಆಮ್ಲಜನಕ ಪೂರೈಸುವಂತೆ ಕೇಂದ್ರ ಸರಕಾರಕ್ಕೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ.
0 comments:
Post a Comment