ಬಂಟ್ವಾಳ, ಎಪ್ರಿಲ್ 05, 2021 (ಕರಾವಳಿ ಟೈಮ್ಸ್) : ಮಂಗಳೂರಿನ ಅಲ್-ವಫಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಎಪ್ರಿಲ್ 7 ರಂದು 12 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವು ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ.
ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಹಾಜಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೂರ್ನಡ್ಕ ಪೀರ್ ಮೊಹಲ್ಲಾ ಜಮಾಅತ್ ಖಾಝಿ ಹಾಜಿ ಬಿ.ಕೆ. ಅಬ್ದುಲ್ ಖಾದಿರ್ ಮುಸ್ಲಿಯಾರ್ ಬಂಬ್ರಾಣ ನಿಕಾಹ್ ನೇತೃತ್ವ ವಹಿಸುವರು. ಅಲ್-ವಫಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಜಿ. ಮುಹಮ್ಮದ್ ಹನೀಫ್ ಗೋಳ್ತಮಜಲು ಸಭಾಧ್ಯಕ್ಷತೆ ವಹಿಸುವರು.
ಮಂಗಳೂರು ಶಾಸಕ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಅಲ್-ಮುಝೈನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ. ಝಕರಿಯಾ ಜೋಕಟ್ಟೆ, ಎಕ್ಸ್‍ಪರ್ಟೈಸ್ ಸಂಸ್ಥೆಯ ಉಪಾಧ್ಯಕ್ಷ ಕೆ.ಎಸ್. ಶೇಖಬ್ಬ ಕರ್ನೀರೆ, ಅಬುಧಾಬಿ ಬ್ಯಾರೀಸ್ ವೆಲ್ಫೇರ್ ಫೆÇೀರಂ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ವೈಟ್ ಸ್ಟೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಬಿ.ಎಂ. ಶರೀಫ್, ಹಾಸನ ಜನಪ್ರಿಯ ಆಸ್ಪತ್ರೆಯ ಮಾಲಕ ಡಾ. ಅಬ್ದುಲ್ ಬಶೀರ್ ವಿ.ಕೆ, ಹೈಸಂ ಸ್ಟೀಲ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಅಹ್ಮದ್ ಶಾಕಿರ್, ಮುಹಮ್ಮದ್ ಫಾರೂಕ್ ಪೆÇೀರ್ಟ್‍ಫೆÇೀಲಿಯೊ, ಮನ್ನಾನ್ ಫೌಂಡೇಶನ್ ಅಧ್ಯಕ್ಷ ಆರಿಫ್ ಬಿ.ಎಂ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
0 comments:
Post a Comment