ಜೈಪುರ, ಎಪ್ರಿಲ್ 14, 2021 (ಕರಾವಳಿ ಟೈಮ್ಸ್) : ಕೊರೋನಾ 2ನೇ ಅಲೆ ತೀವ್ರಗತಿಯಲ್ಲಿ ಹೆಚ್ಚಾಗಿರುತ್ತಿರುವ ಹಿನ್ನಲೆಯಲ್ಲಿ ರಾಜಸ್ಥಾನ ಸರಕಾರ ರಾಜ್ಯದ ಎಲ್ಲಾ ನಗರಗಳಲ್ಲಿ ಶುಕ್ರವಾರದಿಂದ ಆರಂಭಗೊಂಡು ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದೆ. ಎಪ್ರಿಲ್ ತಿಂಗಳಾಂತ್ಯದವರೆಗೂ ಈ ಕ್ರಮ ಜಾರಿಯಲ್ಲಿರಲಿದೆ.
ಪ್ರತಿದಿನ ಸಂಜೆ 5 ಗಂಟೆಯಿಂದ ಮಾರ್ಕೆಟ್‍ಗಳು ಬಂದ್, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಕೇಂದ್ರಗಳು ಸಂಪೂರ್ಣ ಬಂದ್ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಖಾನೆಗಳು ಮತ್ತು ಬಸ್ ನಿಲ್ದಾಣಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಕ್ರೀಡಾ ಸಮಾರಂಭಗಳಿಗೆ ಅವಕಾಶ ನಿರಾಕರಿಸಲಾಗಿದೆ.
ವಿವಾಹ ಕಾರ್ಯಕ್ರಮದಲ್ಲಿ ಗರಿಷ್ಠ 50 ಅತಿಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಬುಧವಾರ ಜೈಪುರದಲ್ಲಿ 1,325 ಸೇರಿದಂತೆ ಒಟ್ಟು 6,200 ಹೊಸ ಕೋವಿಡ್ ಪ್ರಕರಣಗಳು ರಾಜಸ್ಥಾನದಲ್ಲಿ ವರದಿಯಾಗಿದೆ. ಕಳೆದ ತಿಂಗಳು ಶೇ. 2 ರಷ್ಟಿದ್ದ ಪಾಸಿಟಿವ್ ದರ ಪ್ರಸ್ತುತ ಶೇ. 8ಕ್ಕೆ ಏರಿಕೆಯಾಗಿದೆ.
0 comments:
Post a Comment