ಬೆಂಗಳೂರು, ಎಪ್ರಿಲ್ 11, 2021 (ಕರಾವಳಿ ಟೈಮ್ಸ್) : ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಳದ ನಡುವೆಯೂ ಉನ್ನತ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆಯೇ ಮುಂದುವರೆಯಲಿವೆ. ಪರೀಕ್ಷೆ ಮುಗಿಯುತ್ತಿದ್ದಂತೆಯೇ ಬೇಸಿಗೆ ರಜೆ ನೀಡದೆ ಮುಂದಿನ ವರ್ಷ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್, ಡಿಪೆÇ್ಲೀಮಾ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಎಲ್ಲಾ ವಿಭಾಗದ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ ಎಂದರು.
ಈಗಾಗಲೇ ಶೈಕ್ಷಣಿಕ ವರ್ಷದ ನಾಲ್ಕೈದು ತಿಂಗಳು ತಡವಾಗಿದೆ. ಮತ್ತೆ ತಡವಾದರೆ ಓದು, ಪರೀಕ್ಷೆ, ಫಲಿತಾಂಶ, ಉದ್ಯೋಗ, ಮುಂದಿನ ವ್ಯಾಸಂಗಕ್ಕೆ ಸಮಸ್ಯೆಯಾಗುತ್ತದೆ. ಆದ್ದರಿಂದ ಈ ಸಾಲಿನ ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ ಬೇಸಿಗೆ ರಜೆ ನೀಡದೆ, ಕೂಡಲೇ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದವರು ತಿಳಿಸಿದರು.
ಆಫ್‍ಲೈನ್-ಆನ್‍ಲೈನ್ ಎರಡೂ ಮಾದರಿ ತರಗತಿಗಳು ಆರಂಭಗೊಳ್ಳಲಿದ್ದು, ಆರಂಭದಲ್ಲಿ ಆನ್‍ಲೈನ್ ತರಗತಿಗಳು ಆರಂಭವಾಗುತ್ತದೆ. ಬಳಿಕ ಆಫ್ ಲೈನ್ ತರಗತಿಗಳು ಅರಂಭವಾಗಲಿದೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಬೇಕಾಗುತ್ತದೆ ಎಂದು ಸಚಿವರು ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕೊರೋನಾ ಮಾರ್ಗಸೂಚಿ ಪ್ರಕಾರ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್, ಸ್ವಚ್ಛತೆ, ಕೊರೋನಾ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದವರು ವಿವರಿಸಿದರು.
0 comments:
Post a Comment