ಬೆಂಗಳೂರು, ಎಪ್ರಿಲ್ 19, 2021 (ಕರಾವಳಿ ಟೈಮ್ಸ್) : ಇಂದಿನಿಂದ ಎಪ್ರಿಲ್ 23ರವರೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಹಿತ ರಾಜ್ಯದ ವಿವಿಧೆಡೆ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಅಧಿಕಾರಿಗಳು ನಿನ್ನೆ ಶಿರಾಡಿಯಲ್ಲಿ 4 ಸೆಂ,ಮೀ, ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ 3 ಸೆಂ,ಮೀ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ 4 ಸೆಂ,ಮೀ ಮಳೆಯಾಗಿದೆ. ರಾಜ್ಯದಲ್ಲಿ ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ 39.7 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
0 comments:
Post a Comment