ದಾವಣಗೆರೆ, ಎಪ್ರಿಲ್ 14, 2021 (ಕರಾವಳಿ ಟೈಮ್ಸ್) : ಮಾಜಿ ಸಚಿವ, ಮಂಗಳೂರು ಶಾಸಕ ಯು.ಟಿ. ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ದಾವಣಗೆರೆ ಸಮೀಪದ ಅನುಗೋಡು ಗ್ರಾಮದ ಬಳಿ ಅಪಘಾತಕ್ಕೀಡಾದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮುಂದಿನಿಂದ ಸಂಚರಿಸುತ್ತಿದ್ದ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಖಾದರ್ ಕಾರು ಚಾಲಕ, ಆಪ್ತ ಸಹಾಯಕ ಲಿಬ್ಝತ್ ಅವರ ನಿಯಂತ್ರಣ ಮೀರಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಶಾಸಕ ಖಾದರ್ ಅವರ ಕಾರಿನ ಮುಂಭಾಗದ ಪಾಶ್ರ್ವ ಜಖಂಗೊಂಡಿದೆ. ಅದೃಷ್ಟವಶಾತ್ ಶಾಸಕರು ಹಾಗೂ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ಅವರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಯು.ಟಿ. ಖಾದರ್ ಮತ್ತೊಂದು ವಾಹನದ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
0 comments:
Post a Comment