ಬಂಟ್ವಾಳ, ಎಪ್ರಿಲ್ 28, 2021 (ಕರಾವಳಿ ಟೈಮ್ಸ್) : ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಸಮಿತಿ ಪದಾಧಿಕಾರಿಗಳ ಸಭೆಯು ಬ್ಲಾಕ್ ಅಧ್ಯಕ್ಷ ಇಬ್ರಾಹಿಂ ನವಾಝ್ ಅಧ್ಯಕ್ಷತೆಯಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ನಡೆಯಿತು.
ಸಭೆಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಪ್ರತಿ ಗ್ರಾಮಕ್ಕೆ ಬ್ಲಾಕ್ ಸಮಿತಿಯಿಂದ ನೇಮಿಸಲ್ಪಟ್ಟ ಪದಾಧಿಕಾರಿಗಳ ನೇತೃತ್ವದಲ್ಲಿ ಸ್ಥಳೀಯ ವಾಗಿ ವಲಯ ಸಮಿತಿಗಳನ್ನ ಪುನರ್ರಚನೆ ಮಾಡಿ ಸ್ಥಳೀಯ ಜನರೊಂದಿಗೆ ಬೆರೆತು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಳ್ಳುವ ಮೂಲಕ ಯುವ ಕಾಂಗ್ರೆಸ್ ಸಮಿತಿಯನ್ನು ಕ್ರಿಯಾಶೀಲವಾಗಿಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಜಿ ಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯುವಕರಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಬಂಟ್ವಾಳ ತಾ ಪಂ ಉಪಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಜೋರಾ, ಬಂಟ್ವಾಳ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಪ್ರಶಾಂತ್ ಕುಲಾಲ್, ಸಾಮಾಜಿಕ ಜಾಲತಾಣದ ಸಂಚಾಲಕ ಉಮ್ಮರ್ ಕುಂಞÂ ಸಾಲೆತ್ತೂರು ಮೊದಲಾದವರು ಭಾಗವಹಿಸಿದ್ದರು.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಜಾರಿಗೆ ತಂದ ಕೋವಿಡ್ ಸಹಾಯ ಹಸ್ತ ಎಂಬ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯುಳ್ಳ ಪೆÇೀಸ್ಟರ್ ಬಿಡುಗಡೆಗೊಳಿಸಲಾಯಿತು.
0 comments:
Post a Comment