ಬಂಟ್ವಾಳ, ಮೇ 26, 2021 (ಕರಾವಳಿ ಟೈಮ್ಸ್) : ಕೊರೋನ ವೈರಸ್ ಹಿನ್ನಲೆಯಲ್ಲಿ ಸರಕಾರಿ ಆಸ್ಪತ್ರೆಗಳು ಜನರ ಸೇವೆಗೆ ಸದಾ ಸಿಗುವಂತಾಗಲು ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಅವರು ತನ್ನ ಸ್ವಂತ ನೆಲೆಯಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ಸಾಮಾಗ್ರಿಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬುಧವಾರ ಹಸ್ತಾಂತರಿಸಿದರು.
ಆಧುನಿಕ ಸೌಲಭ್ಯಗಳಿಂದ ಕೂಡಿದ 5 ಬೆಡ್‍ಗಳು, 25 ಆಕ್ಸಿಜನ್ ಸಿಲಿಂಡರ್ ಸೇರದಿಂತೆ ಸುಮಾರು 10 ಲಕ್ಷ ರೂಪಾಯಿ ಮೊತ್ತದ ಸೌಲಭ್ಯಗಳನ್ನು ಶಾಸಕರು ಆಸ್ಪತ್ರೆಗೆ ಒದಗಿಸಿದರು. ಈ ಸಂದರ್ಭ ಬುಡಾ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ಜಿ ಪಂ ಸಿಇಒ ಕುಮಾರ್, ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್, ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ತಾಲೂಕು ಆಸ್ಪತ್ರೆಯ ಪ್ರಭಾರ ವೈದ್ಯಾಧಿಕಾರಿ ಡಾ ಸೌಮ್ಯ, ತಾ ಪಂ ಇಒ ರಾಜಣ್ಣ ಮೊದಲಾದವರು ಜೊತೆಗಿದ್ದರು.
0 comments:
Post a Comment