ಬಂಟ್ವಾಳ : ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಪುಷ್ಪರಾಜ್ ಪೂಜಾರಿಗೆ ಬೀಳ್ಕೊಡುಗೆ - Karavali Times ಬಂಟ್ವಾಳ : ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಪುಷ್ಪರಾಜ್ ಪೂಜಾರಿಗೆ ಬೀಳ್ಕೊಡುಗೆ - Karavali Times

728x90

29 May 2021

ಬಂಟ್ವಾಳ : ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಪುಷ್ಪರಾಜ್ ಪೂಜಾರಿಗೆ ಬೀಳ್ಕೊಡುಗೆ

ಬಂಟ್ವಾಳ, ಮೇ 28, 2021 (ಕರಾವಳಿ ಟೈಮ್ಸ್) : ಇಲ್ಲಿ ತಾಲೂಕು ಕಛೇರಿಯಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಪುಷ್ಪರಾಜ ಪೂಜಾರಿ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಕಂದಾಯ ಇಲಾಖಾ ವತಿಯಿಂದ ಶನಿವಾರ ಬೀಳ್ಕೊಡುಗೆ ಕಾರ್ಯಕ್ರಮ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆಯಿತು. 


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಮಾತನಾಡಿ ಪುಷ್ಪರಾಜ್ ಪೂಜಾರಿ ಕಂದಾಯ ಮತ್ತು ಸರ್ವೆ ಇಲಾಖೆಗಳ ಮಧ್ಯೆ ಯಾವುದೇ ವ್ಯತ್ಯಾಸ ಇಲ್ಲದಂತೆ ಪರಸ್ಪರ ಸಹಕಾರದಿಂದ ಕರ್ತವ್ಯ ನಿರ್ವಹಿಸಲು ಕಾರಣಕರ್ತರಾಗಿದ್ದರು. ಇದರಿಂದ ಎಲ್ಲಾ ಕಾರ್ಯಗಳು ಸುಲಲಿತವಾಗಿ ನಡೆಯಲು ಸಾಧ್ಯವಾಗಿತ್ತು ಎಂದರು. 


    ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ, ಕಡು ಬಡವರಿಂದ ಹಿಡಿದು ಎಲ್ಲಾ ಸಹೋದ್ಯೋಗಿಗಳು ಮತ್ತು ಮೇಲಾಧಿಕಾರಿಗಳ ಜೊತೆ ಅತ್ಯಂತ ಆತ್ಮೀಯತೆಯಿಂದ ವ್ಯವಹರಿಸುವ ಅಪರೂಪದ ಅಧಿಕಾರಿಯಾಗಿದ್ದರು ಪುಷ್ಪರಾಜ್ ಅವರು ಎಂದರು. 


    ಸನ್ಮಾನ ಸ್ವೀಕರಿಸಿ ಮಾತನಾಡಿದ ಪುಷ್ಪರಾಜ್, ಬಂಟ್ವಾಳ ತಾಲೂಕಿನಲ್ಲಿ ಕಂದಾಯ ಇಲಾಖೆಯಿಂದ ದೊರೆತ ಸಹಾಕರ ಮರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರು ಸಮನ್ವತೆಯಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಯಶಸ್ಸು ಸಾಧಿಸಬಹುದು ಎಂದರು. 


    ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ ದೀಪಾ ಪ್ರಭು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಪುಷ್ಪರಾಜ್ ಪೂಜಾರಿಗೆ ಬೀಳ್ಕೊಡುಗೆ Rating: 5 Reviewed By: karavali Times
Scroll to Top