ಬಂಟ್ವಾಳ, ಮೇ 09, 2021 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸರಪಾಡಿ ಎಂಬಲ್ಲಿ ಆಶಾ ಕಾರ್ಯಕರ್ತೆಗೆ ಹಲ್ಲೆ ಯತ್ನ ನಡೆಸಿದ್ದಲ್ಲದೆ ಜೀವ ಬೆದರಿಕೆ ಒಡ್ಡಿದ ವಿಚಾರಕ್ಕೆ ಸಂಬಂಧಿಸಿ ಆರೋಪಿಗಳಾದ ಸ್ಥಳೀಯ ನಿವಾಸಿಗಳಾದ ಸಂದೀಪ್ ಹಾಗೂ ಸಂತೋಷ್ ವಿರುದ್ದ ಶನಿವಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಶನಿವಾರ (ಮೇ 8) ಇಲ್ಲಿನ ಕೊರೋನಾ ಸೋಂಕಿತ ಮಹಿಳೆಯ ಮನೆಗೆ ಆಶಾ ಕಾರ್ಯಕರ್ತೆಯೊಬ್ಬರು ಬಂದು ಮನೆಯವರಲ್ಲಿ ಕರೋನಾ ಪಾಸಿಟಿವ್ ಬಂದ ವ್ಯಕ್ತಿಯ ಆರೋಗ್ಯ ವಿಚಾರಿಸಿಕೊಂಡು ಅವರಿಗೆ ಹೊರಗೆ ತಿರುಗಾಡದಂತೆ ತಿಳಿಸಿ ಬರುತ್ತಿರುವಾಗ ಸೋಂಕಿತೆಯ ಸಂಬಂಧಿಕರಾದ ಆರೋಪಿಗಳು ನನ್ನ ಅತ್ತೆಗೆ ಕರೋನಟೆಸ್ಟ್ ಮಾಡಿಸಿ ಪಾಸಿಟಿವ್ ಬರಿಸಿದ್ದೇ ನೀನು, ನಿನಗೆ ಪಾಸಿಟಿವ್ ಬರಿಸಿದರೆ ಬಾರಿ ಹಣ ಬರುತ್ತದೆ ಎಂದು ಹೇಳಿ, ಅವರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.
ಆರೋಪಿತರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಐ.ಪಿ.ಸಿ ಕಲಂ 354, 506, 269, 270 ಮತ್ತು ಕಲಂ 5 [1] ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿತರನ್ನು ವಶಕ್ಕೆ ಪಡೆದಿರುತ್ತಾರೆ.
0 comments:
Post a Comment