ಬಂಟ್ವಾಳ, ಮೇ 17, 2021 (ಕರಾವಳಿ ಟೈಮ್ಸ್) : ಕೋವಿಡ್ 2ನೇ ಅಲೆ ವ್ಯಾಪಕವಾಗುತ್ತಿರುವ ಹಿನ್ನಲೆಯಲ್ಲಿ ರೋಗಿಗಳಿಗೆ ತುರ್ತು ರಕ್ತದ ಅವಶ್ಯಕತೆ ಕೊರತೆ ನೀಗಿಸುವ ಉದ್ದೇಶದಿಂದ ಮಾಜಿ ಸಚಿವ ಬಿ ರಮಾನಾಥ ರೈ ಮುಂದಾಳುತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ನಾಯಕರು ಬಿ ಸಿ ರೋಡಿನಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರದಲ್ಲಿ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಹಾಗೂ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಶರೀಫ್ ಭೂಯಾ ನೇತೃತ್ವದಲ್ಲಿ ಪಾಣೆಮಂಗಳೂರು ವಲಯ ಯುವ ಕಾಂಗ್ರೆಸ್ ಸಮಿತಿಯ ಸುಮಾರು 21 ಮಂದಿ ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಶಿಬಿರದಲ್ಲಿ ಒಟ್ಟು 216 ಯೂನಿಟ್ ರಕ್ತ ಸಂಗ್ರಹಿಸಲಾಗಿದೆ.
17 May 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment