ಬೆಂಗಳೂರು, ಮೇ 26, 2021 (ಕರಾವಳಿ ಟೈಮ್ಸ್) : ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡ ಕಾರಣಕ್ಕಾಗಿ ಸರಕಾರ ಮೇ 21 ರಂದು ಘೋಷಿಸಿರುವ ಅಟೋ ರಿಕ್ಷಾ, ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಮೂರು ಸಾವಿರ ರೂಪಾಯಿ ಪರಿಹಾರ ಧನ ವಿತರಣೆಗೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದು, ಆನ್ ಲೈನ್ ಮೂಲಕ ಸರಕಾರದ ಸೇವಾ ಸಿಂಧು ಪೋರ್ಟಲ್ ಮುಖಾಂತರ ಮೇ 27 ರಂದು ಪೂರ್ವಾಹ್ನ 11 ಗಂಟೆಯಿಂದ ಅರ್ಜಿ ಸಲ್ಲಿಕೆ ಪ್ರಾರಂಭಿಸಲಾಗುತ್ತಿದ್ದು, ಅರ್ಹ ಚಾಲಕರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಿದ ಅರ್ಹ ಚಾಲಕರಿಗೆ ನಗದು ಪರಿಹಾರದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುವುದು ಎಂದು ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
26 May 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment