ಬೆಂಗಳೂರು, ಮೇ 14, 2021 (ಕರಾವಳಿ ಟೈಮ್ಸ್) : ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉದ್ಭವಿಸಿದ್ದು, ಶುಕ್ರವಾರ ಹಾಗೂ ಶನಿವಾರ (ಮೇ 14-15) ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಕೊಡಗಿನಲ್ಲಿ ಆಗಲೇ ಜಿಲ್ಲಾಡಳಿತ ಈ ಬಗ್ಗೆ ಎಚ್ಚರಿಕೆ ನೀಡಿದೆ. ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 64 ಮಿಲಿ ಮೀಟರ್‍ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹೀಗಾಗಿ ಇಂದು ಎಲ್ಲೋ ಅಲರ್ಟ್, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಕೊಡಗಿನಲ್ಲಿ 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬಾಗಮಂಡಲ, ಕೋರಂಗಾಲ ಸುತ್ತಮುತ್ತ ಭಾರೀ ಮಳೆ ಸಾಧ್ಯತೆ ಇದೆ ಎಂದು ಆಟೋಗಳಲ್ಲಿ ಮೈಕ್ ಕಟ್ಟಿ ಜಿಲ್ಲಾಡಳಿತ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ. ಎರಡು ದಿನಗಳ ಕಾಲ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೂಡಾ ಜಿಲ್ಲಾಡಳಿತ ಸೂಚಿಸಿದೆ.
0 comments:
Post a Comment