ಬಂಟ್ವಾಳ, ಮೇ 14, 2021 (ಕರಾವಳಿ ಟೈಮ್ಸ್) : ಕಲ್ಲಡ್ಕ ಸಮೀಪದ ಗೊಳ್ತಮಜಲು ನಿವಾಸಿ, ಉದ್ಯಮಿ ಅಬ್ದುಲ್ ರಹಿಮಾನ್ ಹಾಜಿ ಯಾನೆ ಅದ್ದ ಹಾಜಿ (88) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಶುಕ್ರವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಇಲ್ಲಿನ ಹಜಾಜ್ ಸಮೂಹ ಸಂಸ್ಥೆಗಳ ಮಾಲಕ ದಿವಂಗತ ಹಾಜಿ ಜಿ. ಅಬ್ದುಲ್ ಖಾದರ್ ಅವರ ಸಹೋದರರಾಗಿರುವ ಮೃತರು ಕಲ್ಲಡ್ಕ ಜುಮಾ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದಲ್ಲದೆ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಸೇವೆ ಸಲ್ಲಿಸಿರುತ್ತಾರೆ.
ಮೃತರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಅಬ್ದುಲ್ ಹಮೀದ್ ಗೋಳ್ತಮಜಲು ಸಹಿತ 5 ಮಂದಿ ಪುತ್ರರು, ನಾಲ್ವರು ಪುತ್ರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
0 comments:
Post a Comment