ಮಂಗಳೂರು, ಮೇ 18, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಛೇರಿಯಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಶಾಮಿಲಿ (24) ಅವರು ಕೋವಿಡ್ ಬಾಧಿಸಿ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಎಸ್ಪಿ ಸೊನಾವನೆ ಭಗವಾನ್ ಮಾಹಿತಿ ಹಂಚಿಕೊಂಡಿದ್ದಾರೆ.
ಮೂಲತಃ ಕೋಲಾರ ಜಿಲ್ಲಾ ನಿವಾಸಿಯಾಗಿರುವ ಶಾಮಿಲಿ ಕಳೆದ ಜನವರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ನೆಲೆಯಲ್ಲಿ ಪಿಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಏಳು ತಿಂಗಳ ಗರ್ಭಿಣಿಯಾಗಿದ್ದ ಇವರು ಇತ್ತೀಚೆಗೆ ರಜೆಯಲ್ಲಿ ಕೋಲಾರಕ್ಕೆ ತೆರಳಿದ್ದರು. ಅಲ್ಲಿ ಅವರಿಗೆ ಕೋವಿಡ್ ಬಾಧಿಸಿ ಗರ್ಭಧಾರಣೆಯ ಕಾರಣಕ್ಕೆ ಅವರಿಗೆ ಲಸಿಕೆ ನೀಡಲಾಗಿರಲಿಲ್ಲ. ಅವರನ್ನು ಕೋವಿಡ್ ಸಂಬಂಧಿ ಚಿಕಿತ್ಸೆಗಾಗಿ ಮೇ 2 ರಂದು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಮಂಗಳವಾರ (ಮೇ 18) ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಗರ್ಭಿಣಿ ಪಿಎಸ್ಐ ಅವರ ಅಕಾಲಿಕ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೊನಾವಣೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
0 comments:
Post a Comment