ಮಂಗಳೂರು, ಮೇ 15, 2021 (ಕರಾವಳಿ ಟೈಮ್ಸ್) : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಿಂದ ತೌಕ್ತೇ ಚಂಡಮಾರುತ ತೀವ್ರ ಹೊಡೆತ ನೀಡಿರುವ ಪರಿಣಾಮ ಜಿಲ್ಲೆಯಲ್ಲಿ ಭಾರೀ ಗಾಳಿ-ಮಳೆಯಾಗುತ್ತಿದೆ. ಜಿಲ್ಲಾಡಳಿತ ತಕ್ಷಣ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾಕೃತಿಕ ವಿಕೋಪ ತಡೆ, ರಕ್ಷಣೆ ಹಾಗೂ ಪರಿಹಾರಗಳಿಗಾಗಿ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ಸಾರ್ವಜನಿಕರು ಪ್ರಾಕೃತಿಕ ವಿಕೋಪದ ಬಗ್ಗೆ ಗಂಭೀರ ಎಚ್ಚರಿಕೆ ವಹಿಸಬೇಕು. ಸ್ಥಳೀಯವಾಗಿ ಗ್ರಾಮಮಟ್ಟದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸಾರ್ವಜನಿಕರಿಗೆ ನೆರವಾಗಬೇಕು ಎಂದವರು ಇದೇ ವೇಳೆ ಸಲಹೆ ನೀಡಿದ್ದಾರೆ.
0 comments:
Post a Comment