ಬೆಂಗಳೂರು, ಜೂನ್ 18, 2021 (ಕರಾವಳಿ ಟೈಮ್ಸ್) : ಕೊರೋನಾ ಸೋಂಕು ಹಾಗೂ ಲಾಕ್ ಡೌನ್ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಜುಲೈ 3ನೇ ವಾರದಲ್ಲಿ ನಡೆಸುವ ಬಗ್ಗೆ ನಿರ್ಧರಿಸಿರುವ ರಾಜ್ಯ ಸರಕಾರ ಇದೀಗ ಶನಿವಾರ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ sslc.karnataka.gov.in ನಲ್ಲಿ ಈ ಮಾದರಿ ಪ್ರಶ್ನೆ ಪತ್ರಿಕೆ ಅಪ್ಲೊಡ್ ಮಾಡಲಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ವೆಬ್ ಸೈಟಿನಲ್ಲಿ ಅಪ್ಲೋಡ್ ಮಾಡಲಾಗಿದೆ.
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಹು ಆಯ್ಕೆ ಪ್ರಶ್ನೆಗಳನ್ನು ಮಾತ್ರ ಒಳಗೊಂಡಿರಲಿದ್ದು, ಎರಡೇ ದಿನದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಕಲಿಕಾ ಅನುಕೂಲಕ್ಕಾಗಿ ಮಂಡಳಿಯ ವೆಬ್ ಸೈಟಿನಿಂದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್ ಮಾಡಿಕೊಂಡು ಪೂರ್ವ ತಯಾರಿ ಮಾಡಿಕೊಳ್ಳಬಹುದು. ಶಿಕ್ಷಕರು ಕೂಡಾ ಇದಕ್ಕೆ ಹೊಂದಿಕೊಂಡು ವಿದ್ಯಾರ್ಥಿಗಳನ್ನು ತಯಾರಿ ಮಾಡಿಕೊಳ್ಳಲು ಸೂಚಿಸಲಾಗಿದೆ.
0 comments:
Post a Comment