ಬೆಂಗಳೂರು, ಜೂನ್ 03, 2021 (ಕರಾವಳಿ ಟೈಮ್ಸ್) : ರಾಜ್ಯದಲ್ಲಿ ಮತ್ತೆ ಒಂದು ವಾರ ಕೊರೋನಾ ನಿರ್ಬಂಧ ವಿಸ್ತರಿಸಿರುವ ಸಿಎಂ ಯಡಿಯೂರಪ್ಪ ಹೆಚ್ಚುವರಿಯಾಗಿ 500 ಕೋಟಿ ರೂಪಾಯಿ 2ನೇ ಹಂತದ ಪ್ಯಾಕೇಜ್ ಘೋಷಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಸೋಂಕು ನಿವಾರಿಸಲು ತಜ್ಞರ ಸಲಹೆ ಮೇರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಉದ್ದೇಶದಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜೂನ್ 7 ರಿಂದ ಜೂನ್ 14 ರವರೆಗೆ ಅಂದರೆ ಒಂದು ವಾರ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಸದ್ಯ ಇರುವ ಮಾರ್ಗಸೂಚಿ ನಿಯಮಗಳೇ ಮುಂದೆಯೂ ಚಾಲ್ತಿಯಲ್ಲಿರಲಿದೆ ಎಂದರು.
ಸೋಂಕಿನ ಪ್ರಮಾಣ ಶೇ. 5 ಕ್ಕಿಂತ ಕಡಿಮೆಯಾದೆ ವಾರದ ಬಳಿಕ ಅನ್ ಲಾಕ್ ಮಾಡುವ ಬಗ್ಗೆ ಚಿಂತಿಸಲಾಗುವುದು. ಇದಕ್ಕೆ ಜನ ಸರಕಾರದೊಂದಿಗೆ ಸಹಕಾರ ನೀಡಬೇಕು ಎಂದು ವಿನಂತಿಸಿದ ಸಿಎಂ ಯಡಿಯೂರಪ್ಪ ಈಗಾಗಲೇ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಪ್ರಧಾನಿಯವರು ಸಂಪೂರ್ಣ ಅಧಿಕಾರ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳು ಅವರವರ ವ್ಯಾಪ್ತಿಯಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.
ಇದೇ ವೇಳೆ ಸಿಎಂ, ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಿದ್ದು, ಒಟ್ಟು 500 ಕೋಟಿ ರೂಪಾಯಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪವರ್ ಲೂಂ ಕಾರ್ಮಿಕರಿಗೆ ತಲಾ 3 ಸಾವಿರ, ಮೀನುಗಾರರಿಗೆ 3 ಸಾವಿರ, ಮುಜರಾಯಿ ದೇಗುಲಗಳ ಸಿ ವರ್ಗದ ಅರ್ಚಕರು, ಅಡುಗೆ ಕೆಲಸದವರು, ಸಿಬ್ಬಂದಿಗೆ ತಲಾ 3 ಸಾವಿರ, ಮಸೀದಿಗಳ ಪೇಶ್ ಇಮಾಮ್ ಮತ್ತು ಮುಅಝಿನ್ ಗಳಿಗೆ 3 ಸಾವಿರ., 42 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿದ್ದು, ಅವರಿಗೆ 3 ಸಾವಿರ, 59 ಸಾವಿರ ಅಂಗನವಾಡಿ ಸಹಾಯಕರಿಗೆ ತಲಾ 2 ಸಾವಿರ ರೂಪಯಿ ಘೋಷಿಸಲಾಗಿದೆ.
59 ಸಾವಿರ ಅಂಗನವಾಡಿ ಸಹಾಯಕರಿಗೆ ತಲಾ 2 ಸಾವಿರ, ಶಾಲಾ ಮಕ್ಕಳಿಗೆ ಜೂನ್ ಹಾಗೂ ಜುಲೈ ತಿಂಗಳಲ್ಲಿ ಅರ್ಧ ಕೆಜಿ ಹಾಲಿನ ಹುಡಿ ವಿತರಣೆ ಮಾಡಲಾಗುತ್ತದೆ. ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ 5 ಸಾವಿರ, ಪ್ರಾಥಮಿಕ ಮತ್ತು ಪ್ರೌಢಶಾಲಾ ಅನುದಾನ ರಹಿತ ಶಿಕ್ಷಕರಿಗೆ 5 ಸಾವಿರ ನೀಡಲಾಗುತ್ತದೆ ಎಂದು ವಿವರಿಸಿದರು. ಎಂಎಸ್ಎಂಇ ಹೊರತುಪಡಿಸಿ ಉಳಿದ ಕೈಗಾರಿಕೆಗಳ ಮೇ, ಜೂನ್ ಗಳಲ್ಲಿ ಮಾಸಿಕ ವಿದ್ಯುತ್ ಬಿಲ್ ಕಟ್ಟುವುದನ್ನು ಸರ್ಕಾರ ಮುಂದೂಡಿದೆ.
0 comments:
Post a Comment