ಮಂಗಳೂರು, ಜೂನ್ 10, 2021 (ಕರಾವಳಿ ಟೈಮ್ಸ್) : ವಿದೇಶ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯ ಮೊದಲ ಡೋಸ್ ಜೂನ್ 14ರ ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ, ನಗರ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲ ಲಸಿಕಾ ಕೇಂದ್ರಗಳಲ್ಲಿ ಆದ್ಯತೆ ಮೇರೆಗೆ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.
ವಿದೇಶಕ್ಕೆ ಪ್ರಯಾಣಿಸುವವರು ತಮ್ಮ ಪಾಸ್ ಪೋರ್ಟ್, ವಿಸಾ ಅಥವಾ ಪ್ರಯಾಣದ ಟಿಕೆಟ್ ದಾಖಲೆಯಾಗಿ ತೋರಿಸಿ ಅವರ ಗ್ರಾಮದ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ ಎಂದು ಡೀಸಿ ತಿಳಿಸಿದ್ದಾರೆ.
0 comments:
Post a Comment