ನವದೆಹಲಿ, ಜೂನ್ 18, 2021 (ಕರಾವಳಿ ಟೈಮ್ಸ್) : ಕೋವಿಡ್ ಸೋಂಕು ಹಾಗೂ ಲಾಕ್ ಡೌನ್ ಕಾರಣಕ್ಕಾಗಿ ಮೋಟಾರು ವಾಹನ ದಾಖಲೆಗಳಾದ ಚಾಲನಾ ಪರವಾನಗಿ (ಡಿಎಲ್), ವಾಹನ ನೋಂದಣಿ (ಆರ್‌ಸಿ) ಸಹಿತ ಪರವಾನಗಿ ದಾಖಲೆಗಳ ಸಿಂಧುತ್ವ ಅವಧಿಯನ್ನು ಸೆ. 30 ರವರೆಗೆ ವಿಸ್ತರಿಸಿ ಕೇಂದ್ರ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ವಾಹನಗಳ ಫಿಟ್ನೆಸ್, ಪರ್ಮಿಟ್, ಲೈಸನ್ಸ್, ರಿಜಿಸ್ಪ್ರೇಷನ್ ಹಾಗೂ ಇತರ ದಾಖಲಾತಿಗಳ ಮಾನ್ಯತೆಯನ್ನು ಸೆ. 30 ರವರೆಗೆ ವಿಸ್ತರಿಸಲಾಗಿದೆ.
ಇದು ಫೆಬ್ರವರಿ 1 ರಿಂದ ಅವಧಿ ಮೀರಿದ ಅಥವಾ ಸೆಪ್ಟೆಂಬರ್ 30, 2021 ರೊಳಗೆ ಪರವಾನಗಿ ಮುಕ್ತಾಯಗೊಳ್ಳುವ ಎಲ್ಲಾ ವಾಹನಗಳಿಗೆ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
0 comments:
Post a Comment