ಬಂಟ್ವಾಳ, ಜೂನ್ 08, 2021 (ಕರಾವಳಿ ಟೈಮ್ಸ್) : ತಾಲೂಕಿನ ಬಿ ಸಿ ರೋಡು ಮುಖ್ಯ ವೃತ್ತದ ಬಳಿ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಚಲಿಸುತ್ತಿದ್ದ ಟ್ಯಾಂಕರಿನ ಚಕ್ರದಲ್ಲಿ ಏಕಾಏಕಿ ಬೆಂಕಿ ಕಾಣಸಿಕೊಂಡ ಪರಿಣಾಮ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಘಟನೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಮಂಗಳೂರಿನಿಂದ ಇಂಧನ ತುಂಬಿಸಿಕೊಂಡು ಬೆಂಗಳೂರು ಕಡೆ ತೆರಳುತ್ತಿದ್ದ ಟ್ಯಾಂಕರಿನ ಚಕ್ರದಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು ಹೊಗೆಯಾಡತೊಡಗಿದೆ. ಇದನ್ನು ನೋಡಿದ ಸ್ಥಳೀಯರು ಟ್ಯಾಂಕರ್ ಚಾಲಕಗೆ ವಿಷಯ ತಿಳಿಸುತ್ತಿದ್ದಂತೆ ಆತ ಟ್ಯಾಂಕರ್ ನಿಲ್ಲಿಸಿ ಕೆಳಗೆ ಇಳಿದುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಬಳಿಕ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿದ್ದು, ಅಗ್ನಿಶಾಮಕ ದಳದ ವಾಹನ ಬಂದು ಬೆಂಕಿ ನಂದಿಸಿದೆ.
8 June 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment