ರಿಯಾದ್, ಜೂನ್ 13, 2021 (ಕರಾವಳಿ ಟೈಮ್ಸ್) : ಕೋವಿಡ್ ವೈರಸ್ ಹಾಗೂ ಲಾಕ್ ಡೌನ್ ಕಾರಣದಿಂದ ಕಳೆದ ಬಾರಿಯಂತೆ ಈ ಬಾರಿಯು ಹಜ್ ಯಾತ್ರೆಗೆ ನಿರ್ಬಂಧ ವಿಧಿಸಿ ಸೌದಿ ಅರೇಬಿಯಾ ಸರಕಾರ ಆದೇಶಿಸಿದೆ.
ತನ್ನ ದೇಶದ ಕೇವಲ 60 ಸಾವಿರ ಮಂದಿಗೆ ಮಾತ್ರ ಅನುಮತಿ ನೀಡುವುದಾಗಿ ಸೌದಿ ಅರೇಬಿಯಾ ಸರಕಾರ ಈ ಬಾರಿ ಹೇಳಿಕೊಂಡಿದೆ. ಹಜ್ ಸಚಿವಾಲಯ ಮತ್ತು ಉಮ್ರಾ ಈ ನಿರ್ಧಾರವನ್ನು ಸೌದಿ ಸರಕಾರದ ಪ್ರೆಸ್ ಏಜೆನ್ಸಿ ಪ್ರಕಟಿಸಿದೆ.
ಕಳೆದ ವರ್ಷವೂ ಕೋವಿಡ್ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಯಾತ್ರಿಕರು ಭಾಗವಹಿಸಿದ್ದರು.
ಜುಲೈ ಮೂರನೇ ವಾರದಲ್ಲಿ ಈ ವರ್ಷದ ಹಜ್ ಯಾತ್ರೆ ಆರಂಭವಾಗಲಿದ್ದು, 18 ರಿಂದ 65 ವಯಸ್ಸಿನ ಯಾತ್ರಿಕರಿಗೆ ಮಾತ್ರ ಸೀಮಿತಗೊಳಿಸಿ ಅವಕಾಶ ಕಲ್ಪಿಸಲಾಗಿದೆ. ಯಾತ್ರೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.
160 ವಿವಿಧ ರಾಷ್ಟ್ರಗಳ ಮೂರನೇ ಎರಡರಷ್ಟು ವಿದೇಶಿ ನಿವಾಸಿಗಳು ಸಾಮಾನ್ಯವಾಗಿ ಹಜ್ ಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಳೆದ ವರ್ಷ ವಿದೇಶಿಯರಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಈ ನಿರ್ಬಂಧ ಜಾರಿಯಾಗುವಷ್ಟರಲ್ಲೇ 1 ಸಾವಿರ ಮಂದಿ ಹಜ್ ಯಾತ್ರೆ ಮಾಡಲು ಸೌದಿ ಅರೇಬಿಯಾ ತಲುಪಿಯಾಗಿತ್ತು. ಅವರೆಲ್ಲ ಸೌದಿ ಅರೇಬಿಯಾ ಸುತ್ತಮುತ್ತ ಇದ್ದು ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ ಎಂದು ಸೌದಿ ಸರಕಾರ ಹೇಳಿದೆ.
0 comments:
Post a Comment