ಬೆಂಗಳೂರು, ಜೂನ್ 13, 2021 (ಕರಾವಳಿ ಟೈಮ್ಸ್) : ರಾಜ್ಯದ ಕರಾವಳಿ ಜಿಲ್ಲೆಗಳೂ ಸೇರಿದಂತೆ ವಿವಿಧೆಡೆ ಶನಿವಾರದಿಂದ ನೈರುತ್ಯ ಮುಂಗಾರು ಚುರುಕುಗೊಂಡಿದ್ದು ತೀವ್ರ ರೀತಿಯಲ್ಲಿ ಮಳೆಯಾಗುತ್ತಿದೆ. ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ನಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಹಾಗೂ ಭಾನುವಾರ ಉತ್ತಮ ಮಳೆಯಾಗುತ್ತಿದೆ. ಕುಕ್ಕೆ ಸುಬ್ರಮಣ್ಯ, ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ಮಟ್ಟದಲ್ಲಿ ಗಂಟೆಗೆ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
0 comments:
Post a Comment