ಬಂಟ್ವಾಳ, ಜೂನ್ 11, 2021 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕರ ಘಟಕ, ಹಾಗೂ ಪಾಣೆಮಂಗಳೂರು ವಲಯ ಕಾಂಗ್ರೆಸ್ ಸಮಿತಿ ಇವುಗಳ ಜಂಟಿ ಅಶ್ರಯದಲ್ಲಿ ಪೆಟ್ರೋಲ್, ಡೀಸಿಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ವಿರುದ್ದ ‘100 ನಾಟೌಟ್’ ಪ್ರತಿಭಟನೆ ಜೂನ್ 12 ರಂದು ಶನಿವಾರ (ನಾಳೆ) ಬೆಳಿಗ್ಗೆ 9 ಗಂಟೆಗೆ ಮೆಲ್ಕಾರಿನ ರಚನಾ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿಕೊಂಡು ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ವಲಯ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಇಕ್ಬಾಲ್ ಜೆಟಿಟಿ ಹಾಗೂ ಬಂಟ್ವಾಳ ಪುರಸಭಾ ಸ್ಥಳೀಯ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 June 2021
- Blogger Comments
- Facebook Comments
Subscribe to:
Post Comments (Atom)
0 comments:
Post a Comment