ಬಂಟ್ವಾಳ, ಜೂನ್ 01, 2021 (ಕರಾವಳಿ ಟೈಮ್ಸ್) : ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವುಗಳ ಸಹಯೋಗದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರ ಸೂಚನೆಯಂತೆ ಪುದು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ‘ವೈದ್ಯರ ನಡೆ ಹಳ್ಳಿಯ ಕಡೆ’ ಗ್ರಾಮ ಮಟ್ಟದಲ್ಲಿ ಮನೆ ಮನೆ ಭೇಟಿ ಹಾಗೂ ಅನಾರೋಗ್ಯ ಪೀಡಿತರಿಗೆ ಧೈರ್ಯ ತುಂಬುವ ವಿನೂತನ ಕಾರ್ಯಕ್ರಮಕ್ಕೆ ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭ ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲೀಡಿಯಾ ಪಿಂಟೋ, ಸದಸ್ಯ ಇಕ್ಬಾಲ್ ಸುಜೀರ್, ವೈದ್ಯಾಧಿಕಾರಿಗಳಾದ ಡಾ ಸುದರ್ಶನ್, ಹೇಮ ಪ್ರಭು, ಸಿಬ್ಬಂದಿಗಳಾದ ಮುಸ್ತಫಾ, ಪ್ರಿಯಾ, ಮಾಳವಿಕಾ ಹಾಗೂ ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
0 comments:
Post a Comment