ಬಂಟ್ವಾಳ, ಜೂನ್ 14, 2021 (ಕರಾವಳಿ ಟೈಮ್ಸ್) : ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕೆಲವೆಡೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ತಾಲೂಕಿನ ಮೂಡನಡುಗೋಡು ಗ್ರಾಮದ ನಡ್ಯೋಡಿ ಗುತ್ತು ಅಮ್ಮುಶೆಟ್ಟಿ ಇವರ ಮನೆಗೆ ತೆಂಗಿನ ಮರ ಬಿದ್ದು ಪಕ್ಕಾ ಮನೆ ಹಾನಿಯಾಗಿರುತ್ತದೆ.
ಕೊಯಿಲ ಗ್ರಾಮದ ಕೈತ್ರೋಡಿ ಕ್ವಾಟ್ರಸ್ ನಿವಾಸಿ ಶಾಂತಾ ಕೋಂ ಅರುಣ ಅವರ ಮನೆಗೆ ಹಾನಿ ಸಂಭವಿಸಿದೆ ಎಂದು ತಾಲೂಕು ಕಛೇರಿ ಮಾಹಿತಿ ತಿಳಿಸಿದೆ.
0 comments:
Post a Comment