ಬೆಂಗಳೂರು, ಜೂನ್ 18, 2021 (ಕರಾವಳಿ ಟೈಮ್ಸ್) : 2020-21ನೇ ಸಾಲಿನ ಎಸ್.ಎಸ್.ಪಿ. (ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್)ಯಲ್ಲಿ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆಯಾ ಇಲಾಖೆ ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಕೊನೆ ದಿನಾಂಕ ಜುಲೈ 1, 2021 ಹಾಗೂ ವಿಕಲ ಚೇತನ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅಂತಿಮ ದಿನಾಂಕ ಆಗಸ್ಟ್ 31, 2021ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಬಾಕಿ ಇರುವ ವಿದ್ಯಾರ್ಥಿಗಳು ಅಂತಿಮ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿ ಸದುಪಯೋಗಪಡೆದುಕೊಳ್ಳ ಬಹುದು.
0 comments:
Post a Comment