ಬೆಂಗಳೂರು, ಜೂನ್ 11, 2021 (ಕರಾವಳಿ ಟೈಮ್ಸ್) : ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿಗೆ ಒಳಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ ಸಿದ್ದಲಿಂಗಯ್ಯ (66) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು.
ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಸಿದ್ದಲಿಂಗಯ್ಯ ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.
0 comments:
Post a Comment