ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ : ಸಂಜೆ 5ರವರೆಗೂ ಅನ್ ಲಾಕ್ - Karavali Times ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ : ಸಂಜೆ 5ರವರೆಗೂ ಅನ್ ಲಾಕ್ - Karavali Times

728x90

19 June 2021

ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ : ಸಂಜೆ 5ರವರೆಗೂ ಅನ್ ಲಾಕ್

ಬೆಂಗಳೂರು, ಜೂನ್ 19, 2021 (ಕರಾವಳಿ ಟೈಮ್ಸ್) : ಕೋವಿಡ್ ಪ್ರಕರಣಗಳ ದರ 5 ಶೇಕಡಾ ಕಡಿಮೆ ಇರುವ 16 ಜಿಲ್ಲೆಗಳಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆ ಮಾಡಿ ಸಿಎಂ ಯಡಿಯೂರಪ್ಪ ಶನಿವಾರ ಘೋಷಿಸಿದ್ದಾರೆ. ಇಂತಹ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ ಸಂಜೆ 5 ಗಂಟೆವರೆಗೆ ಶೇ 50 ಸಾಮಥ್ರ್ಯದೊಂದಿಗೆ ಎಲ್ಲಾ ಸೇವೆಗಳನ್ನು ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. 

ಶೇಕಡಾ 5ಕ್ಕಿಂತ ಕಡಿಮೆ ಪಾಸಿಟಿವಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಸಡಿಲಿಕೆ ಅನ್ವಯವಾಗಲಿದೆ. 

ಈ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಎಸಿ ಹಾಕದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆಯವರೆಗೆ ಶೇ. 50 ಸಾಮಥ್ರ್ಯದೊಂದಿಗೆ ಅವಕಾಶ ನೀಡಲಾಗಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮಥ್ರ್ಯದೊಂದಿಗೆ ಪ್ರಯಾಣಿಸಬಹುದು. ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ.50ರ ಸಾಮಥ್ರ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ.50 ಸಾಮಥ್ರ್ಯದೊಂದಿಗೆ  (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಲಾಗಿದೆ. 

ಶೇ.5ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಸಹಿತ ಹಾಸನ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುವುದಾಗಿ ಘೋಷಿಸಲಾಗಿದೆ. ಅಂದರೆ ಮಧ್ಯಾಹ್ನ 12 ಗಂಟೆವರೆಗೆ ಅನ್ ಲಾಕ್ ಇರಲಿದ್ದು, ಬಳಿಕ ಲಾಕ್ ಆಗಲಿದೆ. 

ಶೇ. 10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕಫ್ರ್ಯೂ ಇರುತ್ತದೆ. ವಾರಾಂತ್ಯದ ಕಫ್ರ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.


  • Blogger Comments
  • Facebook Comments

0 comments:

Post a Comment

Item Reviewed: ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ : ಸಂಜೆ 5ರವರೆಗೂ ಅನ್ ಲಾಕ್ Rating: 5 Reviewed By: karavali Times
Scroll to Top