ಬಂಟ್ವಾಳ, ಜೂನ್ 05, 2021 (ಕರಾವಳಿ ಟೈಮ್ಸ್) : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಸಜ್ಜುಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಲೋಕಾರ್ಪಣೆಗೊಳಿಸಿದರು. ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ.
ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ ಪಂ ಸದಸ್ಯ ಎಂ ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋಚನಾ ಜಿ ಕೆ ಭಟ್, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ಅಧ್ಯಕ್ಷ ಬಿ ದೇವದಾಸ್ ಶೆಟ್ಟಿ, ತಾ ಪಂ ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ ಪಂ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಗ್ರಾ ಪಂ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್, ಡಾ ಉಮೇಶ್ ಅಡ್ಯಾಂತಾಯ, ಇಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಯು ರಾಜೇಶ್ ನಾಯಕ್ ಅವರು ವಾಮದಪದವು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ನಲ್ಲಿನ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಬಂಟ್ವಾಳ ವಿಸ್ತರಣಾಧಿಕಾರಿ ಬಿಂದಿಯಾ ನಾಯಕ್ ಇಲ್ಲಿನ ವ್ಯವಸ್ಥೆಗಳ ಬಗ್ಗೆ ವಿವರಿಸಿದರು.
0 comments:
Post a Comment